Breaking News

ಬಿಜೆಪಿ ಜಾತಿ ಬಣ್ಣ ಕಟ್ಟುತ್ತಿದ್ದಾರೆ : ಸಿದ್ದ ರಾಮಯ್ಯ


ಬೆಂಗಳೂರು: ಬಿಜೆಪಿಯ ‘ಲಿಂಗಾಯತ ವಿರೋಧಿ ಕಾಂಗ್ರೆಸ್‌’ ಅಭಿಯಾನದ ಬಗ್ಗೆ ತಿರುಗೇಟು ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿಯವರು ತಮ್ಮ ಸರ್ಕಾರದ ಭ್ರಷ್ಟಾಚಾರ, ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿ ಬಣ್ಣ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್‌ನ ಲಿಂಗಾಯತ ವಿರೋಧಿ ಅನ್ನುವುದಾದರೆ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಯಾರು? ಯಡಿಯೂರಪ್ಪ ಯಾವ ಜಾತಿ? ವಿಜಯೇಂದ್ರನಿಗೆ ಸಚಿವ ಸ್ಥಾನ ನೀಡದಿರುವುದು ಯಾಕೆ? ವಿಜಯೇಂದ್ರ ಯಾವ ಜಾತಿ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯೇ ಲಿಂಗಾಯತ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಪರೋಕ್ಷ ಟಾಂಗ್‌ ಕೂಡ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ‘ಲಿಂಗಾಯತ ವಿರೋಧಿ ಕಾಂಗ್ರೆಸ್‌’ ಅಭಿಯಾನ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ತಮ್ಮ ಸರ್ಕಾರದ ತಪ್ಪು, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ. ಜಾತಿಗೂ ಭ್ರಷ್ಟಾಚಾರಕ್ಕೂ ಏನು ಸಂಬಂಧ. ಗುತ್ತಿಗೆದಾರರು ಬಿಜೆಪಿ ಸರ್ಕಾರದ ಮೇಲೆ ಮಾಡಿದ 40 ಪರ್ಸೆಂಟ್‌ ಕಮಿಷನ್‌ ಆರೋಪವನ್ನು ಸದನದಲ್ಲಿ ಪ್ರಸ್ತಾಪ ಮಾಡಿದರೆ ಅದು ಹೇಗೆ ಜಾತಿ ಲೆಕ್ಕಾಚಾರ ಆಗುತ್ತದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *