Breaking News

ದಕ್ಷಿಣ ಕನ್ನಡದಲ್ಲಿ ದೀಪಗಳಿಂದ ಅಲಕಂರಿಸಿದ ನವರಾತ್ರಿ ಸಂಭ್ರಮ



ಮಂಗಳೂರು/ ಉಡುಪಿ/ಕಾಸರಗೋಡು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.ವಿವಿಧ ದೇಗುಲಗಳು ವಿದ್ಯುತ್‌ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ.

ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸೇರಿದಂತೆ ವಿವಿಧ ದೇವಿ ಆಲಯಗಳಲ್ಲಿ ನವರಾತ್ರಿಯ ವಿಶೇಷ ಪೂಜೆ ನೆರವೇರಲಿದೆ. “ಮಂಗಳೂರು ದಸರಾ’ ಎಂದೇ ಮನ್ನಣೆ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಾಗೂ ರಥಬೀದಿಯ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *