ಮೈಸೂರು : ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದರು.
ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ ಐಪಿ ಸೆಕ್ಟರ್ಗಳಿಗೆ ವಿದ್ಯುತ್ ಸಂಪರ್ಕ ನೀಡುವುದರ ಕುರಿತು ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಣೆ ಮಾಡಬೇಕು. ಹಾಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ , ರಾಜ್ಯದಲ್ಲಿ ವಿದ್ಯುತ್ ದರ ಬಗ್ಗೆ ಒಂದು ಸಲ ಹೆಚ್ಚಾದ್ದಾರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ನಮ್ಮ ಸರ್ಕಾರ ಬಂದ ಮೇಲೆ ಅಥವಾ ನಾನು ಸಚಿವನಾದ ಮೇಲೆ ದರ ಪರಿಷ್ಕರಣೆ ನೀತಿ ಜಾರಿಗೆ ಬಂದಿಲ್ಲ. ಕಳೆದ 7 ವರ್ಷಗಳಿಂದ ಈ ಇಂತಹ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

