ಟೋಕಿಯೊ (ಜಪಾನ್): ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊಗೆ ಆಗಮಿಸಿದ್ದಾರೆ.
ಓಸಾಕಾದ ಪೂರ್ವದಲ್ಲಿ ಜುಲೈ 8 ರಂದು ನಾರಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಅಬೆ ಅವರು ಬೀದಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಅಂದು ಸಂಜೆ ಸಂಜೆ 5:03 ಕ್ಕೆ ಅಬೆ ನಿಧನರಾದರು ಎಂದು ಘೋಷಿಸಲಾಯಿತು.
ಅಬೆಗೆ ಶ್ರದ್ಧಾಂಜಲಿ ಸಲ್ಲಿಸಲು ಜಪಾನ್ ದೇಶಕ್ಕೆ ಆಗಮಿಸಿದ ಬಗ್ಗೆ ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಗೆ ವಿದೇಶಿ ಗಣ್ಯರಿಗೆ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿರುವ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ವಿಧಿಸಿದ್ದು, ಹಲವಾರು ವಿದೇಶಿ ಗಣ್ಯರು ಭಾಗವಹಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

