ಬೆಂಗಳೂರು : ಕೆಲ ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಕರ್ನಾಟಕದಲ್ಲಿ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಸಿಲಿಕಾನ್ ಸಿಟಿ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇದೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ಕರ್ನಾಟಕದಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಮಳೆ ಅನಾಹುತ ಸೃಷ್ಟಿಸಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ಮಳೆ ಇಂದೂ ಸಹ ದೆಹಲಿಯಲ್ಲಿ ಸುರಿಯಲಿದೆ. ದೆಹಲಿ ಮಾತ್ರವಲ್ಲದೆ ಹತ್ತಿರದ ರಾಜ್ಯಗಳು ಸಹ ಮಳೆಯನ್ನು ಕಾಣಲಿವೆ. ಇಂದು ಈಶಾನ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಅರುಣಾಚಲ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಅಧಿಕ ಮಳೆಯಾಗುವ ಎಚ್ಚರಿಕೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

