Breaking News

ಪೋಕ್ಸೋ ಕೇಸ್ : ಮುರುಘಾ ಶ್ರೀಗಳಿಗೆ ಬಿಗ್ ಶಾಕ್



ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ  ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳಿಗೆ  ಈಗಾಗಲೇ ಕೋರ್ಟ್ ಜಾಮೀನು ನಿರಾಕರಿಸಿತ್ತು. ಅವರ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶಿಸಿ ಶಾಕ್ ನೀಡಿತ್ತು. ಈ ಬೆನ್ನಲ್ಲೇ ಇಂದಿನ ಸಭೆಯಲ್ಲಿ ಮುರುಘಾ ಶರಣರನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ತೆಗೆದು, ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡೋದಕ್ಕೆ ನಿರ್ಧಾರ ಕೈಗೊಂಡು ಮತ್ತೊಂದು ಬಿಗ್ ಶಾಕ್ ನೀಡಲಾಗಿದೆ.

ಇಂದು ಮುರುಘಾ ಮಠದ  ಡಾ.ಶಿವಮೂರ್ತಿ ಶಿವಶರಣರು ಪೋಸ್ಕೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ನಡೆಸಲಾಯಿತು.

ಇಂದಿನ ಸಭೆಯಲ್ಲಿ ಸಮುದಾಯದ ಮುಖಂಡರು ಸೇರಿದಂತೆ ಅನೇಕರು ಭಾಗವಹಿಸಿದ್ದು, ಮಹತ್ವದ ವಿಷಯಗಳ ಕುರಿತಂತೆ ಚರ್ಚೆ ನಡೆಸಲಾಗಿದೆ. ಇದಲ್ಲದೇ ಮುರುಘಾ ಶ್ರೀಗಳು ಜೈಲುಪಾಲು ಆಗಿರುವ ಹಿನ್ನಲೆಯಲ್ಲಿ, ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಿತು ಎನ್ನಲಾಗಿದೆ.

ಅಂತಿಮವಾಗಿ ಮುರುಘಾ ಮಠಕ್ಕೆ, ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡೋದಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಮುರುಘಾ ಶ್ರೀಗಳನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ಕೈಬಿಟ್ಟು, ಹೊಸ ಪೀಠಾಧ್ಯಕ್ಷರ ಆಯ್ಕೆಯ ಬಗ್ಗೆ ಶೀಘ್ರವೇ ನಿರ್ಧಾರ ಹೊರ ಬೀಳಲಿದೆ ಎನ್ನಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *