ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ ಇರಲಿದ್ದು, ರಜೆ ಕಾಲದಲ್ಲಿ ಕಾರ್ಯನಿರ್ವಹಿಸುವ ನ್ಯಾಯ ಪೀಠಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ರಚಿಸಿದ್ದಾರೆ.
ಅ. 3 ರಿಂದ 7 ರವರೆಗೆ ರಜಾ ಕಾಲದಲ್ಲಿ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್, ಟಿ.ಜಿ. ಶಿವಶಂಕರೇಗೌಡ ಅವರ ನೇತೃತ್ವದ ರಜಾ ಕಾಲದ ವಿಭಾಗಿಯ ಪೀಠ ಎಂಟನೇ ಕೋರ್ಟ್ ಹಾಲ್ ನಲ್ಲಿ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಎನ್.ಎಸ್. ಸಂಜಯ್ ಗೌಡ, ಎಂ.ಜಿ.ಎಸ್. ಕಮಲ್, ಸಿ.ಎಂ. ಪೂಣಚ್ಚ ಅವರು ಏಕಸದಸ್ಯ ಪೀಠಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವರು.
bigtvnews | Hubli Dharwad News | Kannada News | Karnataka News Hubli News | News In Hubli | Local news

