ಗುಂಡ್ಲುಪೇಟೆ (ಚಾಮರಾಜನಗರ): ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿ, ನಾಯಕರಿಗೆ ಸ್ವಾಗತ ಕೋರಲು ಮಾಡಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿದ್ದಾರೆ. ಇದು ಕಾಂಗ್ರೆಸ್ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.
ಪಟ್ಟಣ ಊಟಿ ಸರ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಅದರ ಎರಡು ಬದಿಯಲ್ಲಿ ಅಳವಡಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ನಾಯಕರ ಸುಮಾರು 40ಕ್ಕೂ ಅಧಿಕ ಫ್ಲೇಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಲ್ಲಿ ಹರಿದು ಹಾಕುವ ಮೂಲಕ ದುಷ್ಕೃತ್ಯ ಮೆರೆದಿದ್ದಾರೆ.
ಈ ಕುರಿತು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ ಪ್ರಸಾದ್ ಪ್ರತಿಕ್ರಿಯೆ ನೀಡಿ, ಭಾರತ್ ಜೋಡೋ ಯಾತ್ರೆ ಗುಂಡ್ಲುಪೇಟೆಯಿಂದ ಆರಂಭವಾಗುತ್ತಿರುವ ಕಾರಣ ಯಾತ್ರೆ ತಡೆಯಬೇಕು ಎಂಬ ಉದ್ದೇಶದಿಂದ ದುಷ್ಕರ್ಮಿಗಳು ರಾತ್ರೋ ರಾತ್ರಿ ಫ್ಲೇಕ್ಸ್ ಗಳನ್ನು ಹರಿದು ಹಾಕಿದ್ದಾರೆ. ಇದ್ಯಾವುದಕ್ಕೂ ನಾವು ಹೆದರುವುದಿಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

