Breaking News

ಭಾರತ್ ಜೋಡೋ ಪಾದಯಾತ್ರೆ, ಬಿಗಿ ಪೊಲೀಸ್ ಬಂದೋಬಸ್ತ್ ಗೆ ಗೃಹ ಸಚಿವ ಆರಗ ಸೂಚನೆ



ಬೆಂಗಳೂರು : ಇಂದಿನಿಂದ ಕರ್ನಾಟಕದಲ್ಲಿ ‘ಭಾರತ್ ಜೋಡೋ ಪಾದಯಾತ್ರೆ’ ಆರಂಭವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ಈಗಾಗಲೇ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದ್ದು, ಪಾದಯಾತ್ರೆ ಸಾಗುವ ಸ್ಥಳದಲ್ಲಿ ಬಂದೋಬಸ್ತ್ ಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕೆಂದು, ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಸೂಚನೆ ನೀಡಿದ್ದಾರೆ . ಸಿದ್ದರಾಮಯ್ಯಹೇಳಿಕೆಯೇದೊಡ್ಡದುರ್ದೈವ

ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ,ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು

ದೇಶಪ್ರೇಮಿಗಳು ಹಾಗೂ ಬಡವರಿಗೆ ನೆರವಾಗುತ್ತಿರುವ ಸಂಘಟನೆ ಆರ್​ಎಸ್​ಎಸ್​ , ದೇಶ ಸಮಸ್ಯೆಗಳಿಗೆ ಸಿಲುಕಿದಾಗ ಆರ್​ಎಸ್​ಎಸ್​ ಹಲವು ರೀತಿಯಲ್ಲಿ ನೆರವಿಗೆ ಬಂದಿದೆ. ದೇಶದಲ್ಲಿ ದೇಶಪ್ರೇಮ ಜಾಗೃತಿ ಮಾಡುತ್ತಿರುವ ಸಂಘಟನೆಯನ್ನು ನಿಷೇಧಿಸಬೇಕು ಎನ್ನುವುದು ದುರ್ದೈವ ಎಂದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *