Breaking News

ಅದ್ದೂರಿಯಾಗಿ ನೆರವೇರಿದ ರೈತ ದಸರಾ ಮೆರವಣಿಗೆ


ಚಾಮರಾಜನಗರ:  ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತ ದಸರಾ ಮೆರವಣಿಗೆಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಎತ್ತಿನ ಬಂಡಿಗಳು ನಾಗರಿಕರ ಗಮನಸೆಳೆದವು.

ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರೈತ ದಸರಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಎತ್ತಿನ ಬಂಡಿಗಳ ಮೆರವಣಿಗೆಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯತ್ರಿ ಅವರು ಹಸಿರು ನಿಶಾನೆ ತೋರಿದರು.

ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಹೊರಟ ಮೆರವಣಿಗೆ ಸಾಂಸ್ಕೃತಿಕ ಕಲಾತಂಡಗಳಾದ ಡೊಳ್ಳುಕುಣಿತ, ನಗಾರಿ, ಡಮರುಗ, ಬ್ಯಾಂಡ್‌ಸೆಟ್ ಕಲಾವಿದರೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಮುಕ್ತಾಯಗೊಂಡಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳುವ ಮೂಲಕ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಗತಿಪರ ರೈತರು ಇತರೆ ರೈತರಿಗೂ ಪ್ರೇರಣೆಯಾಗಬೇಕು ಎಂದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *