Breaking News

ಕಾಬೂಲ್‌ನಲ್ಲಿ ಬಾಂಬ್ ಸ್ಪೋಟ : ಕನಿಷ್ಠ 19 ಜನರು ಸಾವು



ಕಾಬೂಲ್‌:ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ  ಶಿಕ್ಷಣ ಕೇಂದ್ರವೊಂದರಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.

ಇನ್ನು ಘಟನೆಯಲ್ಲಿ 29ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ . ಸ್ಥಳೀಯ ಕಾಲಮಾನ ಬೆಳಗ್ಗೆ 7:30ಕ್ಕೆ ಕಾಜ್ ಶಿಕ್ಷಣ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ, ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಎನ್‌ಜಿಒ ಆಫ್ಘನ್ ಪೀಸ್ ವಾಚ್ ತನ್ನ ಟ್ವಿಟರ್ ಪೋಸ್ಟ್‌ನಲ್ಲಿ, , ಹಜಾರಾ ನೆರೆಹೊರೆಯಲ್ಲಿರುವ ಕಾಜ್ ಶೈಕ್ಷಣಿಕ ಕೇಂದ್ರವನ್ನು ಗುರಿಯಾಗಿಸಿಕೊಂಡು, ಆತ್ಮಾಹುತಿ ಬಾಂಬರ್ ವಿದ್ಯಾರ್ಥಿಗಳ ನಡುವೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಹೇಳಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *