Breaking News

ಗೋಡೌನ್ ನಲ್ಲಿ ಹಾಕಿದ್ದ ನೂರಕ್ಕೂ ಹೆಚ್ಚು ಕುರಿಗಳ ಸಾವು

ಹುಬ್ಬಳ್ಳಿ : ಮಟನ್ ಮಾರುಕಟ್ಟೆಯಲ್ಲಿರುವ ಗೋಡೌನ್ ಒಳಗಡೆ ಹಾಕಲಾಗಿದ್ದ ನೂರಕ್ಕೂ ಹೆಚ್ಚು ಕುರಿಗಳು ಸತ್ತು ಹೋದ ಘಟನೆ ಹಳೇ ಹುಬ್ಬಳ್ಳಿಯ ಮೇಧಾರ ಓಣಿಯ ಕುಂಬಾರ ಸಾಲ ಹತ್ತಿರದ ಮಟನ್ ಮಾರುಕಟ್ಟೆಯಲ್ಲಿ ನಡೆದಿದೆ.

ನಿನ್ನೆಯಷ್ಟೇ ವರುಣನ ಅಬ್ಬರಕ್ಕೆ ಕುರಿಗಳನ್ನು ಮಾರುಕಟ್ಟೆಯ ಗೋಡೌನ್ ಒಳಗೆ ಹಾಕಲಾಗಿದ್ದು, ನೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಹಾಗೂ ಕುರಿಗಳ ಮಾಲೀಕರು ದೌಡಾಯಿಸಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು‌. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *