Breaking News

ಬೆತ್ತಲೆ ಫೋಟೋ ಆರೋಪ : ಓರ್ವ ಬರ್ಬರವಾಗಿ ಕೊಲೆ


ಚಿಕ್ಕಬಳ್ಳಾಪುರ: ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪ ಸಂಬಂಧ ನಡೆದ ಜಗಳದಲ್ಲಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನನ್ನ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ದೊಡ್ಡಬಳ್ಳಾಫುರ ಮೂಲದ ಯುವಕ ನಂದಾ (ಕೊಲೆಯಾದವ) ಎಂಬಾತ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದನು. ಈ ಸಂಬಂಧ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಇದೀಗ ಹಾರೋಬಂಡೆ ಗ್ರಾಮದ ಬಳಿ ನಂದಾ ಹೆಣವಾಗಿ ಬಿದ್ದಿದ್ದು, ವಿಡಿಯೋ, ಫೋಟೋ ವಿಚಾರಕ್ಕೆ ದ್ವೇಷದಿಂದ ದರ್ಶನ್ ಮತ್ತು ಆಶ್ರಯ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬರ್ಬರ ಕೊಲೆ ವಿಚಾರ ತಿಳಿದ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *