Breaking News

ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ದಾಳಿ


ಬೆಂಗಳೂರು : ನಿಯಮ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.

ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅಪ್ರಾಪ್ತರಿಗೆ ಪಬ್ ಗೆ ಪ್ರವೇಶ, ಮದ್ಯ ಸೇವನೆಗೆಅವಕಾಶ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಬೋಟೈ, ಇಕಿಗೈ,ಸ್ಕೈ ಬಾರ್ ಗಳ ಮೇಲೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *