Breaking News

ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು


ಹೈದರಾಬಾದ್(ತೆಲಂಗಾಣ): ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ರಂಗಾರೆಡ್ಡಿ ಜಿಲ್ಲೆಯ ಯಾಚರಂ ಮಂಡಲದ ತಾಡಿಪರ್ತಿ ಗ್ರಾಮದಲ್ಲಿ ನಡೆದಿದೆ. ಸಮ್ರೀನ್, ಖಾಲಿದ್, ರೆಹಾನ್ ಮತ್ತು ಇಮ್ರಾನ್ ಮೃತ ಬಾಲಕರು.

ದರ್ಗಾಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಈಜಲು ಎರ್ರಕುಂಟಾ ಹೊಂಡಕ್ಕೆ ಇಳಿದಿದ್ದಾರೆ. ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿದ್ದು, ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕರೆಲ್ಲರೂ 14 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಅವರೆಲ್ಲರೂ ಹತ್ತಿರದ ಸಂಬಂಧಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *