Breaking News

ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ರಾಗಾ



ಮೈಸೂರು: ಭಾರತ್​ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು, ಮತ್ತೆ ವಾಪಸ್​ ಮೈಸೂರಿಗೆ ಆಗಮಿಸಿದ ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿ ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

ಅತ್ ಕಾಂಗ್ರೆಸ್​ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೆಹಲಿಯಿಂದ ಮೈಸೂರಿಗೆ ಆಗಮಿಸಿದರು. ಚಾಮುಂಡಿ ದರ್ಶನ ಪಡೆದು ಮತ್ತೆ ಶ್ರೀರಂಗಪಟ್ಟಣಕ್ಕೆ ಹಿಂತಿರುಗಿರುವ ರಾಹುಲ್​ಗಾಂಧಿ, ಪರಿವರ್ತನ ಶಾಲೆಯಲ್ಲಿ ನಡೆಯುವ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಊಟದ ಬಳಿಕ ಪಾದಯಾತ್ರೆ ಮುಂದುವರಿಯಲಿದೆ. ಅತ್ತ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುನಿಯಪ್ಪ, ಎಂ.ಬಿ. ಪಾಟಿಲ್ ಸೇರಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ಕೆಲ ಕಾಲ ಇರುವ ಸೋನಿಯಾ, ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *