Breaking News

ಇನ್​ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ : ಇದೀಗ ಪೋಲಿಸ್ ರ ಅತಿಥಿ


ನವದೆಹಲಿ: ನೂರೆಂಬತ್ತು ಕೆ.ಜಿ. ತೂಕದ 23 ವರ್ಷದ ಯುವಕನೊಬ್ಬ ಪೊಲೀಸ್ ಸಮವಸ್ತ್ರ ಧರಿಸಿ, ಇನ್​ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ ಮಾಡುತ್ತಿದ್ದು, ಕೊನೆಗೂ ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಮೋಸ ಮಾಡಲು ಹೋಗಿ ಸಿಕ್ಕಿಹಾಕಿಕೊಂಡವನ ಹೆಸರು ಮುಖೇಶ್ ಯಾದವ್. ಉತ್ತರಪ್ರದೇಶದ ಘಾಜಿಯಾಬಾದ್ ನಿವಾಸಿಯಾಗಿರುವ ಮುಖೇಶ್ ಯಾದವ್, ತುಂಡ್ಲಾದ ಜರೌಲಿಕಾಲ ಮೋರ್​ನ ರಾಜಾತಾಲ್​ ಚೌಕಿ ಬಳಿ ಇನ್​ಸ್ಪೆಕ್ಟರ್ ಸಮವಸ್ತ್ರ ಧರಿಸಿ ರಾತ್ರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದನ್ನು ಚಾಳಿ ಮಾಡಿಕೊಂಡಿದ್ದ. ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ರಹಸ್ಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರಂಭದಲ್ಲಿ ಟೋಲ್​ನಿಂದ ಉಚಿತವಾಗಿ ಪಾಸ್ ಆಗಲು ಇನ್​ಸ್ಪೆಕ್ಟರ್ ಐಡಿ ಮಾಡಿಟ್ಟುಕೊಂಡಿದ್ದೆ ಎಂದು ವಿಚಾರಣೆ ವೇಳೆ ಮಾಹಿತಿ ನೀಡಿರುವ ಈತ, ಕೊನೆಗೆ ಯುನಿಫಾರ್ಮ್ ಧರಿಸಿಕೊಂಡು ಇನ್​ಸ್ಪೆಕ್ಟರ್ ಎಂದು ಹೇಳಿಕೊಂಡು ವಸೂಲಿಗೆ ಇಳಿದಿದ್ದರ ಬಗ್ಗೆಯೂ ಒಪ್ಪಿಕೊಂಡಿದ್ದಾನೆ. ಅಲ್ಲದೆ, ತಾನು 180 ಕೆ.ಜಿ. ತೂಕ ಇರುವುದನ್ನೂ ಹೇಳಿಕೊಂಡಿದ್ದಾನೆ. ಆರೋಪಿಯಿಂದ ಎಟಿಎಂ ಕಾರ್ಡ್​, ಪ್ಯಾನ್ ಕಾರ್ಡ್, ಫೇಕ್​ ಐಡಿ ಕಾರ್ಡ್ ಕೂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *