Breaking News

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಹುಬ್ಬಳ್ಳಿ: ಇಲ್ಲಿನ‌ ಸೋನಿಯಾ ಗಾಂಧಿ ನಗರದ ನಿಜಾಮುದ್ದೀನ್ ಪ್ಲಾಟ್ ನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ತೌಸಿಫ್ ಲಕ್ಕುಂಡಿ ಮೇಲೆ‌ ಇಸ್ಮಾಯಿಲ್ ಮತ್ತು ಆತನ‌ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಘಟನೆ ಸಂಬಂಧ ಬೆಂಡಿಗೇರಿ ಠಾಣೆ ಪೊಲೀಸರು ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತೌಸಿಫ್ ಇತ್ತೀಚೆಗಷ್ಟೇ ಸೋನಿಯಾಗಾಂಧಿ ನಗರದಲ್ಲಿ ಮನೆ ಮಾಡಿದ್ದರು. ಇಸ್ಲಾಯಿಲ್ ಗುಂಪು ಕಟ್ಟಿಕೊಂಡು ತೌಸಿಫ್ ಮನೆ‌ ಮುಂದೆ ಬಂದು ನಿಲ್ಲುತ್ತಿದ್ದ. ಈ ಬಗ್ಗೆ ಇಬ್ಬರ ಬಗ್ಗೆ ವಾಗ್ವಾದ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತೌಸಿಫ್ ಕಳೆದ ಪಾಲಿಕೆ‌ ಚುನಾವಣೆಯಲ್ಲಿ ತಿಪ್ಪಣ್ಣ ಮಜ್ಜಗಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *