Breaking News

ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ

ಮೈಸೂರು : ವಿಜಯದಶಮಿಯ ದಿನವಾದ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.

ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.

ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *