Breaking News

ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ‌ ಸಾಧ್ಯತೆ


ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *