Breaking News

ಅ. . ೮ ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದಾದ್ಯಂತ ಉಗ್ರ ಹೋರಾಟ

ಹುಬ್ಬಳ್ಳಿ : ೨೦೧೧ ರ ಜನಸಂಖ್ಯೆಯ ಆಧಾರಿತವಾಗಿ ಪರಿಶಿಷ್ಟ ಜಾತಿಗೆ ೧೫% ರಿಂದ ೧೮% ರ ವರೆಗೆ ಪರಿಶಿಷ್ಟ ಪಂಗಡಕ್ಕೆ ೩% ರಿಂದ ೭.೫% ರ ವರೆಗೆ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಹೆಚ್ಚಿಸಬೇಕು ಇಲ್ಲದಿದ್ದರೆ ಇದೇ. ೮ ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಆಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಮೋಹನ ಗುಡಸಲಮನಿ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನಿರಂತರ ಹೋರಾಟ ಮಾಡಲಾಗಿದೆ ಆದರೆ ಯಾವುದೇ ಪ್ರಯೋಜನವಾಗಿಲ್ಲ. ಕರ್ನಾಟಕದ ಎಲ್ಲಾ ಎಸ್.ಸಿ/ಎಸ್.ಟಿ ಮಠಾಧೀಶರು ಮತ್ತು ನಾಯಕರು ಹೋರಾಟವನ್ನು ತೀವ್ರಗೊಳಿಸಿದ್ದು, ಮೀಸಲಾತಿ ಹೆಚ್ಚಿಸದೇ ಇದ್ದರೆ ಸರ್ಕಾರಿ ವತಿಯಿಂದ ಆಚರಿಸುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ‌.

ಶ್ರೀ ಪ್ರಸನ್ನನಂದಾಪುರಿ ಸ್ವಾಮಿಜಿಗಳ ಆದೇಶ ಮೇರೆಗೆ ನಮ್ಮ ನಡೆ- ಶ್ರೀಗಳ ಕಡೆ ಎನ್ನುವಂತೆ ಇದೇ ದಿ‌. ೯ ರಂದು ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸ್ವಾಮೀಜಿಗಳು ಧರಣಿ ಕುಳಿತು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಚರಿಸಿ, ಸರ್ಕಾರಕ್ಕೆ ಬಿಸಿ ಮುಟ್ಟುಸುವ ಕಾರ್ಯವನ್ನು ಮಾಡುವುದಾಗಿ ಹೇಳಿದರು.

ಧಾರವಾಡ ಜಿಲ್ಲೆಯಿಂದ ಸುಮಾರು ೨೫ ಸಾವಿರಕ್ಕಿಂತ ಹೆಚ್ಚು ಎಸ್.ಸಿ,/ಎಸ್.ಟಿ ಸಮಾಜದ ಜನರು ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶ್ರೀ ಪ್ರಸನ್ನಾನಂದಪುರಿ ಸ್ಚಾಮಿಜಿಗಳು ಕರೆ ನೀಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೇಮನಾಥ ಚಿಕ್ಕತುಂಬಳ ಸೇರಿದಂತೆ ಉಪಸ್ಥಿತರಿದ್ದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *