ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹೊರ ವಲಯದ ಹೆದ್ದಾರಿ ಬಳಿ ಕೋಠಾ ಗ್ರಾಮ ಪಂಚಾಯಿತಿಯ ಪಿಡಿಒ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಜದಂಡಯ್ಯ ಸ್ವಾಮಿ ಎನ್ನುವವರ ಶವ ಪತ್ತೆಯಾಗಿದ್ದು, ಭಾರೀ ಅನುಮಾನಕ್ಕೆಡೆ ಮಾಡಿದೆ.ಲಿಂಗಸುಗೂರು ತಾಲ್ಲೂಕು ಯಲಗಲದಿನ್ನಿ ಗ್ರಾಮದ ಹೊರವಲಯದಲ್ಲಿ ಗಜದಂಡಸ್ವಾಮಿ ತ್ರಿಪುರಾಂತಯ್ಯ (49) ಶವ ಪತ್ತೆಯಾಗಿದೆ. ತಲೆಗೆ ಬಲವಾಗಿ ಕಲ್ಲು ಅಥವಾ ಮಾರಕಾಸ್ತ್ರದಿಂದ ಹೊಡೆತ ಬಿದ್ದಿದೆ. ಇವರು ಲಿಂಗಸುಗೂರು ತಾಲ್ಲೂಕು ಕೋಠ ಗ್ರಾಮದವರಾಗಿದ್ದು, ಅದೇ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಯಿಂದ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಬಡ್ತಿ ಪಡೆದು ಕಾರ್ಯನಿರ್ವಹಿಸುತ್ತಿದ್ದರು.
ದಾರಿ ಮಧ್ಯದಲ್ಲಿ ಬೈಕ್ ನಿಲ್ಲಿಸಿ ಅದರ ಮೇಲೆ ಹೆಲ್ಮೆಟ್ ಇಟ್ಟು ಚಪ್ಪಲಿ ಬಿಡಲಾಗಿದ್ದು, ಪಿಡಿಒ ಶವ ದೂರದಲ್ಲಿ ಪತ್ತೆಯಾಗಿದೆ. ವಿಚಾರ ಅಥವಾ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿರಬಹುದೆಂಬ ಅನುಮಾನ ತೀವ್ರವಾಗಿದ್ದು, ಈ ಘಟನೆಗೆ ಸಂಬಂಧಿಸಿ ಲಿಂಗಸೂಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





