ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಇದೇ 12ರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
‘ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕವಾಗಿ ನಡೆಸಲು ಸರ್ಕಾರ ಮುಂದಾಗಿದೆ. ಸಣ್ಣಪುಟ್ಟ ಗೊಂದಲಗಳು ತಿಳಿಯಾಗಿವೆ. ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಪರವಾಗಿ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ಹಾವೇರಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದು ಹೇಳಿದ್ದಾರೆ. ‘ಅ.17ರಂದು ಹಾವೇರಿ ಯಲ್ಲಿ ಮತ್ತೊಂದು ಸಭೆ ನಡೆಸಿ, ಸ್ಥಳ ಪರಿಶೀಲನೆ ನಡೆ ಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

