Breaking News

ಹಾವು ಕಚ್ಚಿ ರೈತ ಸಾವು


ಹುಣಸೂರು: ರಾಗಿ ಹೊಲದಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದ ವೇಳೆ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ.

ಉದ್ದೂರು ಗ್ರಾಮದ ಲೇ.ಚಿಕ್ಕೇಗೌಡರ ಪುತ್ರ ನಂಜುಂಡೇಗೌಡ(56) ಮೃತ ರೈತ. ಇವರಿಗೆ ಇಬ್ಬರು ಪತ್ನಿಯರು, ಮೂವರು ಮಕ್ಕಳಿದ್ದಾರೆ. ಇವರು ತಮ್ಮ ಜಮೀನಿನಲ್ಲಿ ಬುಧವಾರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *