Breaking News

ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಕಮೆಂಟ್‌ ಮಾಡಿದ್ದ ಪೋಲಿಸ್ ಅಮಾನತು


ವಿಜಯಪುರ: ಪೊಲೀಸರ ವಿರುದ್ಧ ಭಾರತ್ ಜೋಡೋ ಯಾತ್ರೆ ವೇಳೆ ಭಾಷಣದಲ್ಲಿ ಗುಡುಗಿದ್ದ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಕಮೆಂಟ್‌ ಮಾಡಿದ್ದ ವಿಜಯಪುರದ ಪೊಲೀಸ್‌ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾದ ದಿನ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ,” ಇನ್ನು ಆರು ತಿಂಗಳ ನಂತರ ರಾಜ್ಯದಲ್ಲಿ ಸರಕಾರ ಬದಲಾಗುತ್ತದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ.ಕೆಲವು ಪೊಲೀಸರಿಗೆ ಹೇಳಲು ಬಯಸುತ್ತೇನೆ, ನೀವು ಬಿಜೆಪಿ ಜತೆ ಶಾಮೀಲಾದರೆ ನಿಮಗೆ ತಕ್ಕ ಪಾಠ ಕಲಿಸುವ ಕಾಲ ಬರಲಿದೆ” ಎಂದು ಎಚ್ಚರಿಕೆ ನೀಡಿದ್ದರು.

ಸಿದ್ದರಾಮಯ್ಯ ಪೊಲೀಸರ ವಿರುದ್ಧ ಗುಡುಗಿದ್ದ ವಿಡಿಯೋ ಇದ್ದ ಪೋಸ್ಟ್‌ವೊಂದಕ್ಕೆ ಕಮೆಂಟ್ ಮಾಡಿದ್ದ ವಿಜಯಪುರ ಗ್ರಾಮೀಣ ಠಾಣೆಯ ಕಾನ್‌ಸ್ಟೇಬಲ್ ರಾಜಶೇಖರ್ ಖಾನಾಪುರ ಎಂಬಾತ, ” ಪೊಲೀಸರಿಗೆ ಬೈಯ್ಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು” ಎಂದು ಸವಾಲು ಹಾಕಿದ್ದರು. ಇದು ಸಾಮಾಜಿಕ ಜಾಲಾತಾಣಗಳಲ್ಲಿ ಪರ ವಿರೋಧ ಚರ್ಚೆಗೆ ದಾರಿ ಮಾಡಿಕೊಟ್ಟಿತ್ತು.

ಸಿದ್ದರಾಮಯ್ಯ ಅಭಿಮಾನಿಗಳು ಸರಕಾರಿ ಹುದ್ದೆಯಲ್ಲಿದ್ದು ಪಕ್ಷಾತೀತವಾಗಿ ಕೆಲಸ ಮಾಡುವುದನ್ನು ಬಿಟ್ಟು, ಸಾಮಾಜಿಕ ಜಾಲಾತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *