Breaking News

ಅ. 11ರವರೆಗೂ ಭಾರೀ ಮಳೆ ಸಾಧ್ಯತೆ


ಬೆಂಗಳೂರು: ಇಂದಿನಿಂದ ಈ ಜಿಲ್ಲೆಗಳಲ್ಲಕಿ ಅ. 11ರವರೆಗೂ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅ. 11ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.​ ರಾಜ್ಯದ ವಿವಿಧೆಡೆ ಮುಂದಿನ 3 ದಿನ ಭಾರೀ ಮಳೆ ಆಗಲಿದೆ. ಹವಾಮಾನ ವೈಪರೀತ್ಯದಿಂದ ಮಳೆ ಆಗುತ್ತಿದೆ. ಮಳೆ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಪ್ರಮಾಣದ ಮಳೆ ಬೀಳಲಿದೆ. ಅಕ್ಟೋಬರ್ 10 ಮತ್ತು 11ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉತ್ತಮ ಮಳೆ ಆಗಲಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *