ಹುಬ್ಬಳ್ಳಿ: ಟೈರ್ ಸ್ಫೋಟಗೊಂಡು ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಶೆರೆವಾಡ ಸಮೀಪ ನಡೆದಿದೆ.
ಬಸ್ಸಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. KA 25 F 3097 ಸಂಖ್ಯೆಯ ಬಸ್ ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾಗ ಶೆರೆವಾಡ ಗ್ರಾಮದ ಬಳಿ ಏಕಾಏಕಿ ಟೈಯರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾಗುತ್ತಿದಂತೆ ಚಾಲಕ ಬಸ್ನಡಿ ಸಿಲುಕಿದ್ದಾರೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

