Breaking News

ಚರಂಡಿಯಲ್ಲಿ ಗಂಡು ಶಿಶು ಪತ್ತೆ: ಆಶಾ ಕಾರ್ಯಕರ್ತೆಯರಿಂದ ರಕ್ಷಣೆ

ನವಲಗುಂದ : ತಾಲ್ಲೂಕಿನ ಗೊಬ್ಬರಗುಂಪಿ ಗ್ರಾಮದ ಚರಂಡಿಯಲ್ಲಿ ಅನಾಥ ಗಂಡು ಹಸುಗೂಸೊಂದು ಪತ್ತೆಯಾಗಿದ್ದು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮದ ಮಹಿಳೆಯರು ಮಗುವನ್ನು ರಕ್ಷಿಸಿದ್ದಾರೆ.

ಬೆಳಗಿನ ಸುಮಾರು ಆರು ಗಂಟೆಗೆ ಘಟನೆ ಬೆಳಕಿಗೆ ಬಂದಿದ್ದು, ಮಗುವನ್ನು ಕಂಡ ಮಹಿಳೆಯರು ತಕ್ಷಣ ಸ್ವಚ್ಛಗೊಳಿಸಿ, ಹಾಲುಣಿಸಲು ಬಾನಂತಿಯ ಮನೆಯಲ್ಲಿ ಇರಿಸಲಾಗಿದೆ. ಘಟನೆಯನ್ನು ನವಲಗುಂದ ಪೊಲೀಸ್ ಠಾಣೆಗೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಗೆ ತಿಳಿಸಲಾಗಿದೆ.

ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ನವಲಗುಂದ ತಾಲೂಕಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *