Breaking News

108 ಆಯಂಬುಲೆನ್ಸ್ ಸೇವೆ ಸ್ಥಗಿತ : ರೋಗಿಗಳು ಪರದಾಟ


ಬೆಂಗಳೂರು : ಕೆಲ ದಿನಗಳ ಹಿಂದೆ ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ 108 ಆಯಂಬುಲೆನ್ಸ್ ಸೇವೆ ಇದೀಗ ಸಿಬ್ಬಂದಿ ಕೊರೆಯಿಂದಾಗಿ ಮತ್ತೆ ಸ್ಥಗಿತಗೊಂಡಿದೆ. ರೋಗಿಗಳು ಪರದಾಡುವಂತಾಗಿದೆ.

ಈಗ ಸಿಬ್ಬಂದಿ ಕೊರತೆಯಿಂದ ಸಿಗದ 108 ಆಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗಿದೆ. 108 ಕ್ಕೆ ಕರೆ ಮಾಡಿದ್ರೆ ಯಾರೂ ಕರೆ ಸ್ವೀಕರಿಸುತ್ತಿಲ್ಲ. ಹೀಗಾಗಿ ಅನೇಕ ಜಿಲ್ಲೆಗಳಲ್ಲಿ ರೋಗಿಗಳು ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ರಾತ್ರಿಯಿಂದ 108 ಆಯಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆ ಕಂಡುಬಂದಿದೆ.

ವೇತನ ನೀಡದಿದ್ದಕ್ಕೆ 108 ಆಯಂಬುಲೆನ್ಸ್ ನೌಕರರು ಕರ್ತವ್ಯಕ್ಕೆ ಹಾಜರಾಗಿಲ್ಲ ಹೀಗಾಗಿ ಸಿಬ್ಬಂದಿ ಕೊರತೆಯಿಂದಾಗಿ 108 ಸೇವೆಯಲ್ಲಿ ಮತ್ತೆ ಸ್ಥಗಿತವಾಗಿದೆ ಎನ್ನಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *