ನವದೆಹಲಿ: ಪ್ರಸ್ತುತ ದೇಶದ ಹಲವೆಡೆ ಅಕಾಲಿಕ ಮಳೆ ಅನಾಹುತವನ್ನು ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಕರ್ನಾಟಕ, ದೆಹಲಿ, ಯುಪಿ, ಉತ್ತರಾಖಂಡ ಮತ್ತು ಬಿಹಾರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಮೂರ್ನಾಲ್ಕು ದಿನ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಬಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ದೆಹಲಿಯಲ್ಲಿ 13 ನೇ ತಾರೀಖಿನವರೆಗೆ ಅಧಿಕ ಮಳೆಯಾಗಬಹುದು ಎಂದು ಅದು ಹೇಳಿದೆ. ಈ ಸಮಯದಲ್ಲಿ ತಾಪಮಾನ ಕಡಿಮೆಯಾಗುತ್ತದೆ. 13ರ ನಂತರವೂ ದೆಹಲಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಾಳೆ ದೆಹಲಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಇರುತ್ತದೆ. ಈ ಅವಧಿಯಲ್ಲಿ 21 ರಾಜ್ಯಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.
ದೆಹಲಿ ಮಾತ್ರವಲ್ಲ, ಯುಪಿ, ಬಿಹಾರ, ಮಹಾರಾಷ್ಟ್ರ ಸೇರಿದಂತೆ 21 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ನಾಲ್ಕು ದಿನಗಳ ಕಾಲ ಹವಾಮಾನ ವೈಪರೀತ್ಯವಾಗಿರಲಿದೆ. ಈಗಾಗಲೇ ಯುಪಿಯ ನಲವತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಅಕ್ಟೋಬರ್ 14ರವರೆಗೆ ಈ ಅಲರ್ಟ್ ಮುಂದುವರೆಯಲಿದೆ.
ಉತ್ತರಾಖಂಡ ಮತ್ತು ಹಿಮಾಚಲದಲ್ಲೂ ಭಾರಿ ಮಳೆಯಗುವ ನಿರೀಕ್ಷೆ ಇದೆ. ಉತ್ತರಾಖಂಡ ಮತ್ತು ಹಿಮಾಚಲದಲ್ಲಿಯೂ ಅಧಕ ಮಳೆಯಾಗಬಹುದು. ಮತ್ತೊಂದೆಡೆ ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಲಘು ಹಿಮಪಾತವಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಬಿಹಾರದಲ್ಲಿ ಮುಂದಿನ 48 ಗಂಟೆಗಳಲ್ಲಿ 19 ಜಿಲ್ಲೆಗಳಲ್ಲಿ ತೀವ್ರ ಮಳೆಯ ಎಚ್ಚರಿಕೆ ಮುಂದುವರೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

