Breaking News

ಕೇಂದ್ರ ಗೃಹ ಸಚಿವ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ವಿನಾಶಕ್ಕೆ ದಾರಿ : ಹೆಚ್.ಡಿ.ಕುಮಾರಸ್ವಾಮಿ


ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯನ್ನೂ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ದೇಶದ ಮೇಲೆ ಹಿಂದಿ ಹೇರಿಕೆಯ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತಾ ಶಾ ನೇತೃತ್ವದ ಸಮಿತಿ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳು ಜನ ವಿರೋಧಿ ಎಂದು ಕಿಡಿಕಾರಿದ್ದಾರೆ.

ವರದಿಯ ಶಿಫಾರಸುಗಳನ್ನು ಓದಿ ನನಗೆ ದೊಡ್ಡ ಆಘಾತವೇ ಆಯಿತು. ಸರ್ವಾಧಿಕಾರಿ ಮನಃಸ್ಥಿತಿಯಿಂದ ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕಿ ಇಡೀ ದೇಶದ ಮೇಲೆ ಹಿಂದಿ ಹೇರಿ ಬಹುತ್ವದ ಭಾರತವನ್ನು ‘ಹಿಂದಿಸ್ತಾನ್’ ಮಾಡುವ ಹುನ್ನಾರ ಇದರ ಹಿಂದಿದೆ ಎಂದು ದೂರಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *