ಚಿಕ್ಕಬಳ್ಳಾಪುರ: ಭಾರತ್ ಜೋಡೋ ಯಾತ್ರೆ ಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.ಗೌರಿಬಿದನೂರು ಮಾರ್ಗದ ಕಣಿವೆಯಲ್ಲಿ ಈ ಘಟನೆ ನಡೆದಿದೆ. KSRTC ಬಸ್‌ಗೆ ಈ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಿಂದ ಚಿತ್ರದುರ್ಗದ ಕಾರ್ಯಕ್ರಮಕ್ಕೆ ಈ ಬಸ್ ತೆರಳುತ್ತಿತ್ತು. ಅದೃಷ್ಟವಶಾತ್ ಎರಡೂ ಬಸ್‌ಗಳಲ್ಲಿದ್ದ ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ. ಖಾಸಗಿ ಬಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು. ಖಾಸಗಿ ಬಸ್‌ನ ಮುಂಭಾಗದ ಗಾಜು ಸಂಪೂರ್ಣ ಪುಡಿ ಪುಡಿಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

