ಹುಬ್ಬಳ್ಳಿ: ಹಿಂದೂಸ್ತಾನಿ ಸಂಗೀತಕ್ಕೆ ಮಾತ್ರವಲ್ಲದೆ ದೇಶದ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡಿರುವ ಸವಾಯಿ ಗಂಧರ್ವರ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಉದ್ಘಾಟನೆ ಮಾಡುವ ಮೂಲಕ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.
ಹೌದು… ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ ಸವಾಯಿ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, ಕಾರ್ಯಕ್ರಮ ಆಗಮಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವರಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೇ ಕಾರ್ಯಕ್ರಮ ಆರಂಭದ ಮುನ್ನವೇ ಸವಾಯಿ ಗಂಧರ್ವ ಮ್ಯೂಸಿಕ್ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಒಟ್ಟಿನಲ್ಲಿ ಧಾರವಾಡ ಜಿಲ್ಲೆಯ ಹೆಮ್ಮೆಯ ಪ್ರತೀಕವಾಗಿ ಬಿಂಬಿತವಾಗಿರುವ ಸವಾಯಿ ಗಂಧರ್ವರಿಗೆ ಕೇಂದ್ರ ಸರ್ಕಾರ ಮಹತ್ವದ ಗೌರವವನ್ನು ನೀಡಿರುವುದು ನಿಜಕ್ಕೂ ವಿಶೇಷವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

