Breaking News

ಭಾರತ್ ಜೋಡೋ ಯಾತ್ರೆಯ ಮಧ್ಯೆ ರಸ್ತೆಯಲ್ಲಿಯೇ ಪುಷ್ ಅಪ್ ಮಾಡಿದ ರಾಗಾ



ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕದಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ತಂಡದ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದ ನಾಯಕರು ಸೇರಿದಂತೆ ಸಾವಿರಾರು ಕಾರ್ಯಕರ್ತರೂ ಸಹ ಹೆಜ್ಜೆ ಹಾಕುತ್ತಿದ್ದಾರೆ.

ಈ ಯಾತ್ರೆಯ ವೇಳೆ ರಾಹುಲ್ ಗಾಂಧಿ ಮಧ್ಯೆ ಮಧ್ಯೆ ತಮ್ಮ ಪಕ್ಷದ ನಾಯಕರಿಗೆ ಉತ್ಸಾಹ ತುಂಬುತ್ತಿದ್ದು, ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಹಿಡಿದು ಓಡಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರ ಜೊತೆಗೂ ಕಾಂಗ್ರೆಸ್ ಬಾವುಟ ಹಿಡಿದು ಒಂದಷ್ಟು ದೂರ ಓಡಿದ್ದರು. ಅಲ್ಲದೆ ‘ಭಾರತ್ ಜೋಡೋ’ ಯಾತ್ರೆಯಲ್ಲಿ ತಮ್ಮೊಂದಿಗೆ ಹೆಜ್ಜೆ ಹಾಕಿದ್ದ ಪಕ್ಷದ ಅಧಿನಾಯಕಿ ಹಾಗೂ ತಮ್ಮ ತಾಯಿ ಸೋನಿಯಾ ಗಾಂಧಿಯವರ ಶೂ ಲೇಸ್ ಕಟ್ಟುವ ಮೂಲಕ ಎಲ್ಲರ ಮೆಚ್ಚುಗೆಗೂ ರಾಹುಲ್ ಗಾಂಧಿ ಪಾತ್ರರಾಗಿದ್ದರು.

ಇದೀಗ ರಾಹುಲ್ ಗಾಂಧಿ ‘ಭಾರತ್ ಜೋಡೋ’ ಯಾತ್ರೆಯ ಮಧ್ಯೆ ರಸ್ತೆಯಲ್ಲಿಯೇ ಪುಟ್ಟ ಬಾಲಕನೊಬ್ಬನೊಂದಿಗೆ ಪುಷ್ ಅಪ್ ಮಾಡಿದ್ದು, ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಾಥ್ ನೀಡಿದ್ದಾರೆ. ಈ ಫೋಟೋವನ್ನು ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವಿಟರ್ ನಲ್ಲಿ ಶೇರ್ ಮಾಡಿದ್ದು, ಒಂದು ಪೂರ್ಣ ಹಾಗೂ ಎರಡು ಅರ್ಧ ಪುಷ್ ಅಪ್ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *