ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್‌ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ ನಾನು ಹೇಳಲ್ಲ, ಅದು ಕೀಳು ಅಭಿರುಚಿಯಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಸಿಎಂ ಆದವರು ಆ ತರಹ ಎಲ್ಲ ಮಾತನಾಡಬಾರದು, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡ್ತಾರೆ ಅಂತ ಅಂದುಕೊಂಡಿರಲಿಲ್ಲ, ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳಾಗಿರಬಹುದೇನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

