ಮಹಾರಾಷ್ಟ್ರ: ಬಿಜೆಪಿ ಮುಖಂಡರೊಬ್ಬರು ಲೈಸೆನ್ಸ್ ಹೊಂದಿದ ತಮ್ಮ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಭಗೀರಥ ಬಯಾನಿ ಸಾವನ್ನಪ್ಪಿದವರಾಗಿದ್ದಾರೆ.
ಬೀಡ್ ಜಿಲ್ಲಾ ಬಿಜೆಪಿ ಘಟಕದ ಮುಖ್ಯಸ್ಥರಾಗಿದ್ದ ಭಗೀರಥ ಬಯಾನಿ, ಮೀರಾ ನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಕೊಠಡಿ ಬಾಗಿಲು ಹಾಕಿಕೊಂಡು ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ.
ಗುಂಡಿನ ಶಬ್ದ ಕೇಳಿಸಿಕೊಂಡ ಕುಟುಂಬಸ್ಥರು ಕೂಡಲೇ ಬಾಗಿಲು ಹೊಡೆದು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಗೀರಥ ಬಯಾನಿ, ಈ ಕಾರಣಕ್ಕಾಗಿಯೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

