Breaking News

ಸಾಲಭಾದೆಯಿಂದ ನದಿಗೆ ಹಾರಿ ಆತ್ಮಹತ್ಯೆ


ಚಾಮರಾಜನಗರ: ಯುವಕನೋರ್ವ ಸಾಲಭಾದೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂ ಬಳಿ ನಡೆದಿದೆ.

24 ವರ್ಷದ ಸಚಿನ್ (24) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದನು. ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು, ಈ ಮೃತ ಯುವಕ ಸಚೀನ್, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೂವರು ಸ್ನೇಹಿತರಿಗೆ ಮೆಸೇಜ್ ಮಾಡಿ, ಆನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಇದೀಗ ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನು ಹೊರ ತೆಗೆದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *