Breaking News

ಹುಬ್ಬಳ್ಳಿಯಿದ ದೆಹಲಿಗೆ ನವೆಂಬರ್​14 ರಿಂದ ನೇರ ವಿಮಾನ ಸೇವೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಅವಳಿ ನಗರದ ಜನರ ಬಹುದಿನಗಳ‌ ಕನಸು ನನಸಾಗುವ ದಿನ ಹತ್ತಿರವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.

ಇಂಡಿಗೋ ಏರ್‌ ಲೈನ್ಸ್‌ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹುಬ್ಬಳ್ಳಿಯಿಂದ ದೆಹಲಿಗೆ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಇದೇ ನವೆಂಬರ್‌ 14, 2022ರಿಂದ ನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಟಿಕೆಟ್‌ ಬುಕ್ಕಿಂಗ್‌ ಕೂಡ ಈಗಾಗಲೇ ಪ್ರಾರಂಭವಾಗಿದೆ.

ಸೇವೆ ಪ್ರಾರಂಭಿಸಿದ ಇಂಡಿಗೋ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಮಾಹಿತಿ‌ ಹಂಚಿಕೊಂಡಿದ್ದಾರೆ.

ದೆಹಲಿ – ಹುಬ್ಬಳ್ಳಿ 10:00 – 12:45
ಹುಬ್ಬಳ್ಳಿ – ದೆಹಲಿ 13:15 – 15:45

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *