ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಗುರುವಾರ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

