Breaking News

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ


ಬೆಂಗಳೂರು : ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಸಿದ್ದರಾಮಯ್ಯ ಅವರ ವಿರುದ್ಧ 200 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಾಗದ ಡಿನೋಟಿಫೈ ಆರೋಪವಿದೆ. ಈ ಹಿನ್ನೆಲೆ ಬಿಜೆಪಿ ನಾಯಕ ಎನ್.ಆರ್.ರಮೇಶ್ ದೂರು ಸಲ್ಲಿಸಲಾಗಿದೆ.

ಲಾಲ್​ಬಾಗ್ ಸಿದ್ಧಾಪುರದ 2 ಎಕರೆ 36.5 ಗುಂಟೆ ಬಿಡಿಎ ಜಾಗವನ್ನ ಬಿಲ್ಡರ್​ಗೆ ಡಿನೋಟಿಫೈ ಮಾಡಿದ ಆರೋಪ ಕೇಳಿ ಬಂದಿದೆ. ಬಿಡಿಎ ಉದ್ಯಾನವನ , ಸಾರ್ವಜನಿಕ ಬಳಕೆಗೆ ಮೀಸಲಿಟ್ಟ ಜಾಗವನ್ನು ಅಶೋಕ್ ಧಾರಿವಾಲ್ ಎಂಬ ಬಿಲ್ಡರ್​ಗೆ ಅನುಕೂಲ ಮಾಡಿಕೊಡಲು ಡಿನೋಟಿಫೈ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಂದಿನ ಬಿಡಿಎ ಆಯುಕ್ತ ಶ್ಯಾಂ ಭಟ್ ವಿರುದ್ಧವೂ ದೂರು ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *