Breaking News

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ


ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದು ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆ ‘ಹಳದಿ ಅಲರ್ಟ್ʼ ಘೋಷಣೆ ಮಾಡಿದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ  ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದ್ದು, ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *