Breaking News

ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇಂದು ಸಭೆ : ಸಿಎಂ



ಬೆಂಗಳೂರು : ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ.

ವಿಜಯಪುರ, ಧಾರವಾಡ, ದಾವಣಗೆರೆ, ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮಳೆಯಿಂದಾಗಿ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿ, ಪರಿಸ್ಥಿತಿ ನಿಭಾಯಿಸುವ ಸಂಬಂಧ ಸಲಹೆ ಸೂಚನೆ ನೀಡಲಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *