Breaking News

ಮೋದಿ ವಿಶ್ವ ಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು : ಸಿದ್ದರಾಮಯ್ಯ


ಬೆಂಗಳೂರು : ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವ ಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಚ್ಚಾ ಎಂದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ಸಹ ಕಿಡಿ ಕಾರಿದ್ದು, ‘ನಿಮ್ಮ ಮುಂದೆ ನರೇಂದ್ರ ಮೋದಿ ಅವರೂ ಬಚ್ಚಾ ಅಲ್ಲವೇ?’ ಎಂದು ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಯಡಿಯೂರಪ್ಪ ಅವರೇ, ಈ ಭಾಷೆ ನಿಮ್ಮ ಘನತೆಗೆ ತಕ್ಕುದಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಗೆ ಪ್ರಶ್ನಾತೀಥರು, ಟೀಕಾತೀಥರು ಇರಬಹುದು. ಆದರೆ, ಭಾರತ ಪ್ರಜಾ ಪ್ರಭುತ್ವ ದೇಶ ಎಂಬುದನ್ನು ಮರೆಯಬೇಡಿ ಎಂದು ಕಿಡಿ ಕಾರಿದೆ. ಅಂದ ಹಾಗೆ, ನಿಮ್ಮ ಮುಂದೆ ಬಚ್ಚಾ ಆಗಿರುವ ಅಮಿತ್‌ ಶಾ ಎದುರು ನೀವು ಕೈ ಕಟ್ಟಿ ನಿಲ್ಲುವುದು ಸರಿಯೇ? ಪ್ರಧಾನಮಂತ್ರಿ ನರೇಂದ್ರ ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ? ಎಂದು ಪ್ರಶ್ನೆ ಮಾಡಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *