ಹುಬ್ಬಳ್ಳಿ: ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದೆ.
ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ನಗರದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದೆ. ನಗರದ ಚೆನ್ನಮ್ಮ ಸರ್ಕಲ್, ಈದ್ಗಾ ಮೈದಾನ,ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಳಿ ಬಂದೋಬಸ್ತ ಮಾಡಲಾಗಿದೆ.
ಇನ್ನೂ ತೀರ್ಪು ಪ್ರಕಟ ಹಿನ್ನಲೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದ್ದು, ಹಿಜಾಬ್ ಕುರಿತು ತೀರ್ಪು ಪ್ರಕಟವಾಗಲಿರುವ ಹಿನ್ನೆಲೆ ತೀರ್ಪು ಮುಸ್ಲಿಂ ಪರ ಬಂದರೆ ಈ ಸಮುದಾಯದವರು ಸಂಭ್ರಮಿಸುವ ಸಾಧ್ಯತೆ ಇದೆ. ಅಲ್ಲದೇ ಇದೇ ಸಮಯದಲ್ಲಿ ಹಿಂದೂ ಸಮುದಾಯದವರು ವಿರೋಧಿಸುವ ಸಾಧ್ಯತೆ ಹೆಚ್ಚಾಗಿದೆ. ಮತ್ತು ಹಿಜಾಬ್ ವಿರೋಧವಾಗಿ ತೀರ್ಪು ಬಂದರೆ ಮುಸ್ಲಿಂ ಸಮುದಾಯದವರು ಧರಣಿ ನಡೆಸಲಿದ್ದು, ಹೀಗಾಗಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

