Breaking News

ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣ : 3 ಜನ ಬಂಧನ



ಬೆಂಗಳೂರು: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಹೆಚ್ ಎ ಎಲ್ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಜೇವರ್ಗಿ ಮೂಲದ ಲಕ್ಕಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಆರ್.ಡಿ ಪಾಟೀಲ್ ಮೂಲಕ ಡೀಲ್ ಮಾಡಿಕೊಂಡು ಇನ್ ಸರ್ವಿಸ್ ಖೋಟಾದಡಿ ಕಸ್ತೂರಿ ನಗರ ಬಳಿಯ ನ್ಯೂ ಹಾರಿಜನ್ ಕಾಲೇಜಿನಲ್ಲಿ ಅಕ್ರಮವಾಗಿ ಲಿಖಿತ ಪರೀಕ್ಷೆ ಬರೆದಿದ್ದ ಎನ್ನಲಾಗಿದೆ.

ಇನ್ನು ಪಿ ಎಸ್ ಐ ಆಯ್ಕೆ ಲಿಸ್ಟ್ ನಲ್ಲಿದ್ದ ಶ್ರೀಮಂತ್ ಹಾಗೂ ಶ್ರೀಶೈಲ್ ಬಿರಾದಾರ್ ಎಂಬ ಇನ್ನಿಬ್ಬರು ಆರೋಪಿಗಳನ್ನು ಧಾರವಾಡದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗಾಗಿ ಬೆಂಗಳೂರಿಗೆ ಕರೆ ತರಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *