ಹುಬ್ಬಳ್ಳಿ:- ಆಟೋ ಹಾಗೂ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ
ವೇಗವಾಗಿ ಬರುತ್ತಿದ್ದ ಬೈಕ್ ಆಟೋಗೆ ಡಿಕ್ಕಿ ಹೊಡೆದಿದೆ.ಇನ್ನೂ ಈ ಅಪಘಾತದಲ್ಲಿ ಆಟೋ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು ಬೈಕ್ ಸಾವರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಆಗಮಿಸಿದ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

