ಯಾದಗಿರಿ: ಹಿಂದು ಧರ್ಮ ತ್ಯಜಿಸಿ ದಲಿತ ಸಮುದಾಯದ ನೂರಾರು ಜನ ಬೌದ್ಧ ಧರ್ಮ ಸ್ವೀಕರ ಮಾಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ.
ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು. ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ ಪ್ರತಿಪಾಧಿಸಿದ 22 ಪ್ರತಿಜ್ಞಾ ವಿಧಿಗಳನ್ನ ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಪಡೆದು ಹಿಂದೂ ಧರ್ಮಕ್ಕೆ ವಿದಾಯ ಹೇಳಿ ಬೌದ್ಧ ಧರ್ಮ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಹುತೇಕರು ಬೌದ್ಧ ಧರ್ಮ ಸ್ವೀಕರ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

