Breaking News

ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದ ಪುತ್ರಿಯರುತು


ತುಮಕೂರು: ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ತುಮಕೂರಿನಲ್ಲಿ ನಿನ್ನೆ ನಡೆದಿದೆ.

ಅನಾರೋಗ್ಯದಿಂದ ಗಂಗಾಧರ್‌ ಮೃತಪಟ್ಟಿದ್ದರು. ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವ ಕೊರಗು ನಿವಾರಿಸಿ, ಸಮಾಜಕ್ಕೆ ಮಾದರಿಯಾಗಿದ್ದಾರೆ.

ಗಂಗಾಧರ್‌ ಅವರು ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು. ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *