Breaking News

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ : ಅರುಣ್ ಸಿಂಗ್


ಹಾವೇರಿ: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ರಾಜ್ಯದಲ್ಲೂ 2023 ರ ಚುನಾವಣೆ ತಯಾರಿ ಬಹಳ ಚೆನ್ನಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾದಗ ಮಾಸೂರಿನಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಗಳಿಂದಾಗಿ ಬಿಜೆಪಿ ಮತ್ತೆ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಪಡೆಯಲಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಗೋವಾ, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶಗಳಲ್ಲಿ ಬಿಜೆಪಿ ಅಧಿಕಾರಗಳಿಸಿದೆ. ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಜನರು ಬಿಜೆಪಿಗೆ ಮತ ಕೊಟ್ಟು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *