ಬೆಂಗಳೂರು : 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆಮನೆಯ ಮೇಲೂ ಅಕ್ಟೋಬರ್ 28ರಿಂದ ಹತ್ತು ದಿನಗಳ ಕಾಲ ಕನ್ನಡ ಧ್ವಜಾರೋಹಣ ಮಾಡಲಾಗುವುದು ಎಂದು ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ರಾಜ್ಯೋತ್ಸವ ಆಚರಣೆ ಕುರಿತು ಕ್ಷೇತ್ರ ವ್ಯಾಪ್ತಿಯ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಅವರು, ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆಮನೆಯ ಮೇಲೂ ರಾಷ್ಟ್ರಧ್ಜಜ ಹಾರಿಸಿದಂತೆಯೇ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಧ್ವಜ ಹಾರಿಸಲಾಗುವುದು. ಈ ಮೂಲಕ ರಾಜ್ಯೋತ್ಸವಕ್ಕೆ ಸಾಮೂಹಿಕ ಸಂಭ್ರಮದ ಸ್ವರೂಪವನ್ನು ಕೊಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

